ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ ಆತ್ಮಹತ್ಯೆ

ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ ಆತ್ಮಹತ್ಯೆ

 


ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಶನಿವಾರ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ.

ಮೊಬೈಲ್ ಕೊಡಿಸದ ಕಾರಣ ಪೋಷಕರ ಮೇಲೆ ಕೋಪಗೊಂಡ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಳಿಕ ಸಂಪೂರ್ಣ ಸುಟ್ಟು ಕರಕಲಾಗಿರುವ ನಾಗರಾಜನ ಮೃತದೇಹ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post