ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ


ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಆದೇಶದಂತೆ ಆದರ್ಶ ಆಸ್ಪತ್ರೆ, ಉಡುಪಿ ಇವರ ಮೂಲಕ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಕಾರ್ಯಕ್ರಮಕ್ಕೆ ಫೆಬ್ರವರಿ 26 ರಂದು ಬೆಳಗ್ಗೆ 11 ಗಂಟೆಗೆ, ನಗರದ ಬೀಡಿನಗುಡ್ಡೆ ದೇವಾಡಿಗರ ಸಭಾಭವನದಲ್ಲಿ ಚಾಲನೆ ನೀಡಲಾಗುವುದು.


ಆರೋಗ್ಯ ಶಿಬಿರದ ವೇಳಾಪಟ್ಟಿ ಹೀಗಿದೆ: ಫೆ. 26 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ನಗರದ ಬೀಡಿನಗುಡ್ಡೆ ದೇವಾಡಿಗರ ಸಭಾಭವನದಲ್ಲಿ, ಫೆ. 27 ರಂದು ನಗರದ ಪ್ರಗತಿನಗರ ಅಂಗನವಾಡಿ ಕೇಂದ್ರ ಹಾಗೂ ಅಲೆವೂರು ಶಾಂತಿನಿಕೇತನ ಶಾಲೆಯಲ್ಲಿ, ಫೆ. 28 ರಂದು ಕಟಪಾಡಿ ಎಸ್.ವಿ.ಎಸ್ ಶಾಲೆ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ರ ವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.  


ನಗರ ಮತ್ತು ತಾಲೂಕಿನ ಎಲ್ಲಾ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರು ಮೂಲ ಗುರುತಿನ ಚೀಟಿ ಹಾಗೂ ಆಧಾರ್ ಗುರುತಿನ ಚೀಟಿಯೊಂದಿಗೆ ಶಿಬಿರದಲ್ಲಿ ಹಾಜರಾಗಬಹುದಾಗಿದೆ.  


ಶಿಬಿರದಲ್ಲಿ ಮೊಬೈಲ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಜೋಡಣೆ ಮಾಡದೆ ಇರುವ ಕಾರ್ಮಿಕರುಗಳಿಗೆ ಅಂಚೆ ಇಲಾಖೆ ವತಿಯಿಂದ “Aadhaar Mobile number updating Camp” ಅನ್ನು ಕೈಗೊಳ್ಳಲಾಗುತ್ತಿದ್ದು, ಕಾರ್ಮಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post