ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಜಿ ಸಿಎಂ ಬಿಎಸ್ ವೈ ಯವರಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್

ಮಾಜಿ ಸಿಎಂ ಬಿಎಸ್ ವೈ ಯವರಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್



ಶಿವಮೊಗ್ಗ: ಹತ್ಯೆಗೀಡಾದ ಹರ್ಷ ಮನೆಗೆ ರವಿವಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ನ ಪರಿಹಾರದ ಚೆಕ್ ನೀಡಿದರು.

ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಮಾಡಿ ಅವರ ಜೊತೆಗೆ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ.

ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ ಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ. ಇದನ್ನೂ ಸಹಿಸಕ್ಕಾಗದೇ ಕೆಲವು ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಇದು ಅತ್ಯಂತ ಅಮಾನುಷ ಕೃತ್ಯ. ಹರ್ಷನ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಸರಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ಅನ್ನು ಅವರಿಗೆ ಕೊಟ್ಟಿದ್ದೇನೆ. ಹಣ ಮುಖ್ಯ ಅಲ್ಲ. ಹರ್ಷನನ್ನು ಕಳೆದುಕೊಂಡ ಕುಟುಂಬದ ನೋವು ದೊಡ್ಡದು. ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂಬ ಪ್ರಾರ್ಥನೆ ಬಿಟ್ಟರೇ ನಮ್ಮ ಕೈಯಲ್ಲಿ ಏನೂ ಇಲ್ಲ ಎಂದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post