ರಾಮಕುಂಜ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರರು ಗಾಯಗೊಂಡ ಘಟನೆಯೊಂದು ಉಪ್ಪಿನಂಗಡಿ- ಕಡಬ ರಾಷ್ಟ್ರೀಯ ಹೆದ್ದಾರಿ ಯಾದ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರದಂದು ರಾತ್ರಿ ಸಂಭವಿಸಿದೆ.
ಪೆರಿಯಡ್ಕ ಸಮೀಪದ ಓಡ್ಲದಲ್ಲಿ ತೋಟದ ಕೆಲಸ ಮಾಡುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು ತನ್ನ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ನಡುವೆ ಗೋಳಿತ್ತಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಪರಿಣಾಮ ರಾಜು ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನೂ ಕೂಡಾ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Post a Comment