ಬಸ್ತಿ (ಉತ್ತರ ಪ್ರದೇಶ): ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.
ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕೇಂದ್ರ ಭದ್ರತಾ ಪಡೆಯ 3 ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದಾರೆ.
ಇನ್ನೂ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
إرسال تعليق