ತಿರುವನಂತಪುರಂ: ಸೋಮವಾರ ಮಧ್ಯರಾತ್ರಿ ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ, 8 ತಿಂಗಳ ಮಗು ಸೇರಿ ಐದು ಮಂದಿ ಸಜೀವ ದಹನಗೊಂಡಿದ್ದಾರೆ.
ಇಂತಹ ದಾರುಣ ಘಟನೆ ಕೇರಳದ ದವಳಪುರಂನಲ್ಲಿ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮನೆ ಮಾಲೀಕ ಪ್ರತಾಪನ್ (64), ಇವರ ಪತ್ನಿ ಶೇರ್ಲಿ(53), ಕಿರಿಯ ಮಗ ಅಖಿಲ್ (25), ಹಿರಿಯ ಮಗನ ಪತ್ನಿ ಅಭಿರಾಮಿ(24) ಮತ್ತು 8 ತಿಂಗಳ ಮೊಮ್ಮಗ ರಾಯನ್ ಮಲಗಿದ್ದಲ್ಲೇ ಸುಟ್ಟು ಹೋಗಿದ್ದಾರೆ.
ಮನೆಯಲ್ಲಿದ್ದ ಮತ್ತೊಬ್ಬ ನಿಖಿಲ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮನೆಯ ಹೊರಗೆ ನಿಲ್ಲಿಸಿದ್ದ ಐದು ಬೈಕ್‌ಗಳು ಸುಟ್ಟು ಕರಕಲಾಗಿವೆ.
ಮನೆಯಿಂದ ಹೊರ ಬರುತ್ತಿದ್ದ ದಟ್ಟ ಹೊಗೆಯನ್ನು ನೋಡಿ ಭಯಗೊಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದರೂ ಅಷ್ಟರಲ್ಲಿ ಮನೆಯಲ್ಲಿ ಐವರು ಸುಟ್ಟು ಹೋಗಿದ್ದಾರೆ.
ಮನೆಯ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿದೆ. ಈ ದುರಂತಕ್ಕೆ ಕಾರಣ ಏನೆಂದು ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
Post a Comment