ಹೈದರಾಬಾದ್: ನಟಿ ನಯನತಾರಾ ಮತ್ತು ವಿಘ್ನೇಶ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಪ್ರಯತ್ನಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಪ್ರೀತಿಯ ವಿಚಾರದಲ್ಲಿ ನಿರಂತರ ಸೋಲುಂಡ ಬಳಿಕ ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಪ್ರೀತಿಯಲ್ಲಿ ಬಿದ್ದಿದ್ದಾರೆ. ಕಳೆದ ಆರು ವರ್ಷಗಳಿಂದ ನಯನತಾರಾ ಹಾಗೂ ವಿಘ್ನೇಶ್ ಡೇಟಿಂಗ್ ಮಾಡುತ್ತಿದ್ದಾರೆ. ಈಗ ಇವರಿಬ್ಬರ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.
ವಿವಾಹದ ಬಳಿಕ ನಯನತಾರಾ-ವಿಘ್ನೇಶ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಇತ್ತೀಚೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಂಪತಿ ಈ ರೀತಿ ಹೆಣ್ಣು ಮಗುವಿನ ಪೋಷಕರಾಗಿದ್ದರು.
إرسال تعليق