ಕುದ್ರೋಳಿ ವಾರ್ಡಿನಲ್ಲಿ 2.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಶಾಲೆಯ ನೂತನ ಕಟ್ಟಡ ಉದ್ಘಾಟನೆ
ಮಂಗಳೂರು: ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಮಂಗಳೂರು ನಗರದ ಎಲ್ಲಾ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ವಾರ್ಡಿನ ಮೌಲಾನ ಆಜಾದ್ ಮಾದರಿ ಸರಕಾರಿ ಶಾಲೆಯಲ್ಲಿ 2.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ಶಾಲೆಗಳ ಕುರಿತು ಕೀಳರಿಮೆ ಸಲ್ಲದು. ಸರಕಾರಿ ಶಾಲೆಗಳಲ್ಲೂ ಆಧುನಿಕ ಶಿಕ್ಷಣ ವ್ಯವಸ್ಥೆಗಳು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
2.35 ಕೋಟಿ ವೆಚ್ಚದಲ್ಲಿ 2 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ. ಪ್ಲೇ ಗ್ರೌಂಡ್, 6 ತರಗತಿ ಕೊಠಡಿಗಳು, ಪ್ರಾಂಶುಪಾಲರ ಕೊಠಡಿ, ಸಭಾಂಗಣ, ಪಾಕಶಾಲೆ, ಶೌಚಾಲಯ ನಿರ್ಮಾಣ ಸೇರಿದಂತೆ ಶಾಲೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗಿದೆ. ಕೇವಲ 9 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು ಇಂದು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಹೇಳಿದರು.
ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಶಾಸಕ ವೇದವ್ಯಾಸ್ ಕಾಮತ್ ಅವರು ಈಗಾಗಲೇ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸ್ಮಾರ್ಟ್ ಸ್ಕೂಲ್ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಶಂಶುದ್ದೀನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜನಪ್ಪ ಎಸ್, ನಿರ್ಮಿತಿ ಕೇಂದ್ರ ಕಾರ್ಯ ನಿರ್ವಹಕ ನಿರ್ದೇಶಕರಾದ ರಾಜೇಂದ್ರ ಕಲ್ಬಾವಿ, ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ, ಮಂಗಳೂರು ಉಪ ವಿಭಾಗ ಮಂಜುನಾಥ ಆರ್, ಶಾಲಾ ಮುಖ್ಯೋಪಾಧ್ಯಾಯರಾದ ಟಿ. ವಿರೂಪಾಕ್ಷ, ಶಾಲೆಯ ಅದ್ಯಾಪಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق