ಬೆಂಗಳೂರು: ಹಿಜಾಬ್ ಕುರಿತಂತೆ ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು 10.30ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೆ ನ್ಯಾಯಪೀಠ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ನಾವು ಇದನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕು. ಎಲ್ಲ ಸಮುದಾಯದ ನಾಯಕರಿಗೆ, ಪಾಲಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕಳಕಳಿಯ ವಿನಂತಿ ಮಾಡುತ್ತೇನೆ. ನಾವೆಲ್ಲರೂ ಹೈಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಎಂದು ಮನವಿ ಮಾಡಿದ್ದಾರೆ.
Post a Comment