ಕೃಷ್ಣಾ ಜಿಲ್ಲೆ: ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಾಜಾಕಾಲುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ತಿಂಗಳ ಮಗು ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಜಗ್ಗಯ್ಯಪೇಟೆ ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಹಾನರ್ ನಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಮೋರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮಗುವಿನ ಅನ್ನಪ್ರಾಶನಕ್ಕಾಗಿ ಕುಟುಂಬ ಸಮೇತ ಏಲೂರಿಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತರನ್ನು ಕುಟುಂಬರಾವ್, ಇಂದಿರಾ, ಶಾಂತಿ, ತಾಯಿ ಮೇರಿ ಮತ್ತು ಆರು ತಿಂಗಳ ಮಗು ರಾಜಕುಮಾರ್ ಎಂದು ಗುರುತಿಸಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment