ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಹಿಳೆಯ ಕೊರಳಿನಿಂದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳ ಬಂಧನ

ಮಹಿಳೆಯ ಕೊರಳಿನಿಂದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳ ಬಂಧನ

 


ಬೆಂಗಳೂರು: ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ ಘಟನೆಯೊಂದು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಕ್ಷಿತ್ ಗೌಡ ಬಂಧಿತ ಆರೋಪಿ. ಆರೋಪಿ ಮಾರ್ಚ್​ 16ರ ಸಂಜೆ ಹೆಬ್ಬಾಳದ ರಸ್ತೆ ಬಳಿ ಆಟೋ ರಿಕ್ಷಾ ಕ್ಕೆ ಕಾಯುತ್ತಿದ್ದ ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ.

ಈ ವೇಳೆ ಮಹಿಳೆ ಜೋರಾಗಿ ಕಿರುಚಿ ಕೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


hit counter

0 تعليقات

إرسال تعليق

Post a Comment (0)

أحدث أقدم