ಮಂಗಳೂರು: ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರ ವಿಶೇಷ ಕೊಡುಗೆ ನೀಡುತ್ತಿದೆ. ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಯ ಮೂಲಕ ರಾಜ್ಯ ಸರಕಾರವು ಭಕ್ತರ ಭಾವನೆಗಳನ್ನು ಗೌರವಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕದ್ರಿ ಮಲ್ಲಿಕಟ್ಟೆ ಶ್ರೀ ದೈವರಾಜಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಮೇಲ್ಛಾವಣಿ ಹಾಗೂ ಇಂಟರ್ ಲಾಕ್ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು ಸಂಸದರು ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ಮತ್ತು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಆ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಈಗಾಗಲೇ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು. ಶಾಸಕ ವೇದವ್ಯಾಸ್ ಕಾಮತ್ ಅವರ ಅಭಿವೃದ್ಧಿ ಪರ ಚಿಂತನೆಯಿಂದ ಮಂಗಳೂರಿನ ಅನೇಕ ದೇವಸ್ಥಾನಗಳಿಗೆ ಅನುದಾನ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
ಬಳಿಕ ಮಾತನಾಡಿದ ಶಾಸಕ ಕಾಮತ್, ಕದ್ರಿ ಮಲ್ಲಿಕಟ್ಟೆ ದೈವರಾಜ ಕೋಟೆದ ಬಬ್ಬುಸ್ವಾಮಿ ಕ್ಷೇತ್ರದ ಮೇಲ್ಛಾವಣಿ ನಿರ್ಮಾಣ ಹಾಗೂ ಇಂಟರ್ ಲಾಕ್ ಅಳವಡಿಕೆಗೆ 50 ಲಕ್ಷ ಅನುದಾನ ಒದಗಿಸಲಾಗಿದೆ. ನಗರದ ಇತಿಹಾಸ ಪ್ರಸಿದ್ಧ ದೇವಸ್ಥಾನಗಳೊಂದಿಗೆ ಎಲ್ಲಾ ದೇವಸ್ಥಾನ ಹಾಗೂ ದೈವಸ್ಥಾನಗಳ ಅಭಿವೃದ್ಧಿಗೆ ಗಮನ ನೀಡಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೆಟರ್ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಶಕಿಲಾ ಕಾವಾ, ಭರತ್ ಸೂಟರ್ ಪೇಟೆ, ಕಿಶೋರ್ ಕೊಟ್ಟಾರಿ, ಕಾವ್ಯಾ ನಟರಾಜ್ ಆಳ್ವ, ಕ್ಷೇತ್ರದ ಗುರಿಕಾರರಾದ ವಿಶ್ವನಾಥ್, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಟ್ರಸ್ಟಿ ಎ.ಜೆ ಶೆಟ್ಟಿ, ಪ್ರಮುಖರಾದ ಜಯ, ಹೇಮಚಂದ್ರ, ಸುಧಾಕರ್ ಪೇಜಾವರ, ಶಿವಪ್ಪ ನಂತೂರು, ಪ್ರದೀಪ್ ಕುಮಾರ್ ಕಲ್ಕೂರ, ಲೋಕನಾಥ್ ಶೆಟ್ಟಿ, ಸುಜನ್ ದಾಸ್ ಕುಡುಪು, ಹೇಮಾನಂದ, ತಾರಾನಾಥ್ ಶೆಟ್ಟಿ, ಯಶವಂತ್, ಫೆಡ್ರಿಕ್ ಪೌಲ್, ರವೀಂದ್ರನಾಥ್ ಶೆಟ್ಟಿ, ವಸಂತ್ ಜೆ ಪೂಜಾರಿ, ಚರಣ್, ಜಗದೀಶ್ ಕದ್ರಿ, ತುಳಸಿದಾಸ್, ರವೀಂದ್ರ, ಜಯರಾಜ್, ಕಿರಣ್ ನಂತೂರು, ಕೇಶವ್ ಕದ್ರಿ, ಗಾಡ್ವಿನ್, ವಿಜಿತ್ ಶೆಟ್ಟಿ, ಅವಿನಾಶ್ ರೈ, ಸಹನ್ ಕದ್ರಿ, ಸುಧೀರ್ ಕದ್ರಿ, ನಾಗೇಶ್ ಕದ್ರಿ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment