ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಮಾಜದಲ್ಲಿ ನಿಸ್ವಾರ್ಥ ಸೇವೆಯಲ್ಲಿ ಹೆಣ್ಣಿನ ಪಾತ್ರ ಮಹತ್ತರ: ಧನಲಕ್ಷ್ಮೀ ಗಟ್ಟಿ

ಸಮಾಜದಲ್ಲಿ ನಿಸ್ವಾರ್ಥ ಸೇವೆಯಲ್ಲಿ ಹೆಣ್ಣಿನ ಪಾತ್ರ ಮಹತ್ತರ: ಧನಲಕ್ಷ್ಮೀ ಗಟ್ಟಿ


ಬಂಟ್ವಾಳ: ಹೆಣ್ಣು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿನ ಎಲ್ಲಾ ಸೇವೆಯನ್ನು ನಿಸ್ವಾರ್ಥವಾಗಿ, ಮುಕ್ತ ಮನಸ್ಸಿನಿಂದ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ  ಮುಖ್ಯ ಪಾತ್ರ ವಹಿಸಿರುವುದು ರಾಷ್ಟ್ರದ ಇತಿಹಾಸದಿಂದ ತಿಳಿದು ಬರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿ ಅಭಿಪ್ರಾಯ ಪಟ್ಟರು.


ಅವರು ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಹಿಳಾ ಮೋರ್ಚಾ ವತಿಯಿಂದ ಸಿದ್ದಕಟ್ಟೆಯ ಅಶ್ವಿನಿ ವಾಣಿಜ್ಯ ಸಂಕೀರ್ಣದ ಅಕ್ಷಯ ಸಭಾಭವನದಲ್ಲಿ ಏರ್ಪಡಿಸಿದ  ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮವನ್ನು ಆಯೋಜಿಸಿದ ಬಂಟ್ವಾಳ ಮಹಿಳಾ ಮೋರ್ಚಾಕ್ಕೆ ಅಭಿನಂದನೆ ಸಲ್ಲಿಸಿದರು.


ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕರು ಹಾಗೂ ಬಿಜೆಪಿ ಹಿರಿಯ ನಾಯಕಿ ಸುಲೋಚನಾ ಜಿ.ಕೆ ಭಟ್ ಮಾತನಾಡಿ ಮಹಿಳೆಯರು ಇತಿಹಾಸದಿಂದಲೂ ಹೋರಾಡಿ ಕೊಂಡು ಬಂದು,ದೇಶ ಕಟ್ಟುವ ವಿಚಾರದಲ್ಲಿ ಗಂಡಸರಿಗೆ ಸಮಾನವಾಗಿ ನಿಂತಿದ್ದಾರೆ.


ಜಾಗತಿಕ ಮಟ್ಟದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹೋದ ವಿದ್ಯಾರ್ಥಿಗಳನ್ನು ಯಾವುದೇ ತೊಂದರೆಯಿಲ್ಲದೆ  ದೇಶಕ್ಕೆ ಮರಳಿ ತರಿಸಿದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರಿಗೆ ಈ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸಿದರು.


ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಮಾತನಾಡಿ ಭಾರತ ದೇಶ ವಿಶ್ವಗುರು ಆಗಬೇಕಾದರೆ ಮಹಿಳೆಯರ ಪಾತ್ರ ಅಗತ್ಯ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ ಎಂದರು.


ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಪಕ್ಷದ ಸಂಘಟನೆಗಾಗಿ ಸೇವೆ ಸಲ್ಲಿಸಿದ ಹಿರಿಯ ಕಾರ್ಯಕರ್ತರಾದ ಶ್ರೀಮತಿ ಆನಂದಿ ಪೂಜಾರಿ ವಾಮದಪದವು, ಶ್ರೀಮತಿ ರೇವತಿ ಆರ್. ಪೂಜಾರಿ ಕರ್ಪೆ ದೋಟ, ಮತ್ತು ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಗೈದ ರಮ್ಯಶ್ರೀ ಜೈನ್ ಸಿದ್ದಕಟ್ಟೆ ಇವರನ್ನು ಸೇರಿದಂತೆ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮನೋನ್ಮಣಿ ಮಾತನಾಡಿ  ಆರೋಗ್ಯದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿದರು.

ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಅಧ್ಯಕ್ಷೀಯ ಭಾಷಣವನ್ನು ಮಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ,  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತ್ರಿವೇಣಿ,

ಪಕ್ಷದ ಪ್ರಮುಖರಾದ ಹರ್ಷಿಣಿ ಪುಷ್ಪಾನಂದ, ಚಂದ್ರವತಿ ಕರಿಯಂಗಳ, ರತ್ನಕುಮಾರ್ ಚೌಟ, ಕಾವಳಪಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮನಾಥ ರಾಯಿ, ಪ್ರದಾನ ಕಾರ್ಯದರ್ಶಿ ಪ್ರಭಾಕರ ಪ್ರಭು, ನರಿಕೊಂಬು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೇಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಸದಸ್ಯೆರಾದ ರೂಪ ಶೆಟ್ಟಿ ಅರಳ, ಉಷಾ, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಕ್ಷಿ ಪೂಜಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಸಿದ್ದಕಟ್ಟೆ ಸಹಕಾರಿ ಸಂಘದ ನಿರ್ದೇಶಕ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಸಂದೇಶ ಶೆಟ್ಟಿ ಪೊಡುಂಬ, ಸಹಕಾರಿ ಸಂಘದ ಮುಖ್ಯ ಕಾರ್ಯ ಕಾರ್ಯನಿರ್ವಹಣಾ ಅಧಿಕಾರಿ ಆರತಿ ಶೆಟ್ಟಿ,ಸಂಗಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷ ಸತೀಶ್ ಪೂಜಾರಿ,  ಉಪಾಧ್ಯಕ್ಷೆ ವಿಮಲ ಮೋಹನ್,ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೀವಿ ಪೂಜಾರಿ ಕರ್ಪೆ, ಬೇಬಿ ಪೂಜಾರಿ ಕುಕ್ಕಿಪಾಡಿ, ಪುರ್ಣಿಮಾ, ಲಿಂಗಪ್ಪ ಪುಜಾರಿ, ಪುಷ್ಪ, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು ಮತ್ತು ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಹಾಗೂ ಕಾರ್ಯಕ್ರಮ ಸಂಘಟಕಿ ಮಂದಾರತಿ ಎಸ್ ಶೆಟ್ಟಿ ಸಾಧಕರ ಪರಿಚಯ ವಾಚಿಸಿದರು.

ಸಂಗಬೆಟ್ಟು. ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ ಪ್ರಭು ಪ್ರಾರ್ಥನೆ ನೆರೆವೇರಿಸಿದರು ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಪ್ರದಾನ ಕಾರ್ಯದರ್ಶಿ ಸೀಮಾ ಮಾಧವ ಸ್ವಾಗತಿಸಿದರು. ಕಾವಳಪಡೂರು ಮಹಾ ಶಕ್ತಿ ಕೇಂದ್ರ ಮಹಿಳಾ ಮೋರ್ಚಾದ ಸಂಚಾಲಕಿ, ಗ್ರಾ. ಪ. ಸದಸ್ಯೆ  ಪ್ರತಿಭಾ ಶೆಟ್ಟಿ  ಧನ್ಯವಾದವಿತ್ತರು.

ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಲಕಿತ. ಆರ್ ಶೆಟ್ಟಿ. ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم