ಉಡುಪಿ: ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕ ಸಾವನಪ್ಪಿದ ಘಟನೆಯೊಂದು ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ.
ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಹರಿಖಂಡಿಗೆ ಕಂಚಿಗುಂಡಿಯಿಂದ ಸೈಕಲ್ ನಲ್ಲಿ ಹೋಗುತ್ತಿರುವಾಗ ಸೈಕಲ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಕವುಚಿ ಬಿದ್ದ ಎನ್ನಲಾಗಿದೆ.
ಇದರಿಂದಾಗಿ ಗಂಭೀರ ಗಾಯಗೊಂಡ ಶ್ರೇಯಸ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق