ಯುಗಳ ಮುನಿಗಳು ಭಾನುವಾರ ಮುಂಜಾನೆ ಧರ್ಮಸ್ಥಳ ಪುರಪ್ರವೇಶ ಮಾಡಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಉಜಿರೆ: ಯುಗಳ ಮುನಿಗಳಾದ ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು ಮತ್ತು ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಭಾನುವಾರ ಮುಂಜಾನೆ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶ ದ್ವಾರದ ಬಳಿ ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಯುಗಳ ಮುನಿಗಳಿಗೆ ಭಕ್ತಿಪೂರ್ವಕ ಸ್ವಾಗತ ಮಾಡಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ (ಹೆಗ್ಗಡೆಯವರ ನಿವಾಸ) ಕರೆತರಲಾಯಿತು.
ಅಲ್ಲಿ ಯುಗಳ ಮುನಿಗಳು ಭಗವಾನ್ ಆದಿನಾಥ ಸ್ವಾಮಿ ಬಸದಿಯಲ್ಲಿ ದೇವರ ದರ್ಶನ ಪಡೆದರು. ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ದೇವರ ದರ್ಶನ ಮಾಡಿ ಪೂಜೆಯನ್ನು ವೀಕ್ಷಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಯುಗಳ ಮುನಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸಂಜೆ ಬಸದಿಯಲ್ಲಿ ಯುಗಳ ಮುನಿಗಳ ಮಂಗಲ ಪ್ರವಚನದಲ್ಲಿ ಹೆಗ್ಗಡೆಯವರು ಮತ್ತು ಕುಟುಂಬದವರು ಹಾಗೂ ಊರಿನ ಶ್ರಾವಕರು ಮತ್ತು ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.
Post a Comment