ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ; 4 ಮಂದಿ ಸಾವು, 12 ಮಂದಿಗೆ ಗಾಯ

ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ; 4 ಮಂದಿ ಸಾವು, 12 ಮಂದಿಗೆ ಗಾಯ

 


ಭಾಗಲ್ಪುರ: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ ನಡೆಸಲಾಗುತ್ತಿದ್ದ ಮನೆಯಲ್ಲಿ ಗುರುವಾರ ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ. ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ತಾತಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಜ್ವಾಲಿಚಕ್‌ನಲ್ಲಿರುವ ಮನೆಯೊಂದರಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಸ್ಫೋಟದ ರಭಸಕ್ಕೆ ಮನೆ ಛಿದ್ರವಾಗಿ ನೆಲಸಮವಾಗಿದೆ. ಮನೆ ಮಾಲೀಕರು ಅಕ್ರಮವಾಗಿ ಪಟಾಕಿ ತಯಾರಿಕೆಯನ್ನು ನಡೆಸುತ್ತಿದ್ದಾರೆ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗಾಯಾಳುಗಳಿಗೆ ಪಟ್ಟಣದ ಜವಾಹರಲಾಲ್ ನೆಹರು ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


hit counter

0 Comments

Post a Comment

Post a Comment (0)

Previous Post Next Post