ಉಡುಪಿ: ಕಾಪು ಮುಲ್ಲಾರು ಬಳಿ ಇಂದು ಬೆಳಗ್ಗಿನ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದರು.
ರಜಾಕ್ ಮತ್ತು ರಜಬ್ ಮೃತ ದುರ್ದೈವಿಗಳು. ಗುಜರಿ ಅಂಗಡಿಯಲ್ಲಿದ್ದ ಮೂವರು ಪಾಲುದಾರರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಫೋಟದ ತೀವ್ರತೆಗೆ ಫ್ರಿಜ್ ಸಹಿತ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲಗೆ, ದಟ್ಟ ಹೊಗೆ ಮುಗಿಲೆತ್ತರಕ್ಕೆ ಆವರಿಸಿತ್ತು.
ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಬಂದು ಉಡುಪಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.
إرسال تعليق