ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿಯೇ ಕೊಲೆಗೈದು ಪೊಲೀಸರಿಗೆ ಶರಣಾದ ಘಟನೆಯೊಂದು ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
31 ವರ್ಷದ ಮುಜಾಮಿಲ್ ಪಾಶಾ ಹತಗಯೆ ಮಾಡಿರುವ ಆರೋಪಿ. ಈತ ಭೈರಪ್ಪ ಲೇಔಟ್ ವಾಸವಾಗಿದ್ದು, ಆಟೋ ಚಾಲಕನಾಗಿದ್ದಾನೆ.
12 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಮೂವರು ಮಕ್ಕಳಿದ್ದಾರೆ.
ತನ್ನ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ ಎನ್ನುವ ವಿಷಯ ತಿಳಿದು ಪತ್ನಿಗೆ ಅನೇಕ ಬಾರಿ ಬುದ್ಧಿವಾದ ಹೇಳಿದ್ದನಂತೆ.
ಆದರೆ ಈ ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಹೀಗೆ ಆರಂಭವಾದ ಜಗಳದ ವೇಳೆ ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
إرسال تعليق