ಮಂಗಳೂರು: ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ ೨೧/೦೨/೨೦೨೨ರಂದು ಅಂತರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಡಾ. ಬಿ. ದೇವದಾಸ ಪೈ ಸಂಶೋಧನಾ ಉಪನ್ಯಾಸಕರು ಶ್ರೀನಿವಾಸ ವಿಶ್ವವಿದ್ಯಾನಿಲಯ ಇವರು “ಬಹುಭಾಷಾ ಕಲಿಕೆಗಾಗಿ ತಂತ್ರಜ್ಞಾನವನ್ನು ಬಳಸುವಲ್ಲಿನ ಸವಾಲುಗಳು ಮತ್ತು ಅವಕಾಶಗಳು” ಎಂಬ ವಿಷಯದ ಬಗ್ಗೆ ತಮ್ಮ ಚಿಂತನೆಯನ್ನು ಕೂಲಂಕುಷವಾಗಿ ಪ್ರಸ್ತಾಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀನಿವಾಸ ಶಿಕ್ಷಣ ಮಹಾವಿದ್ಯಾಲಯದ ಮುಖ್ಯಸ್ಥೆಯಾದ ಡಾ. ಜಯಶ್ರೀ ಬೋಳಾರ್ ರವರು ಮಾತೃಭಾಷೆಯ ಪ್ರಾಮುಖ್ಯತೆ ಮತ್ತು ಮಾತೃಭಾಷೆ ಅಲ್ಲದೆ ವ್ಯವಹಾರಿಕ ಭಾಷೆಯಲ್ಲೂ ಪ್ರಭುತ್ವವನ್ನು ಸಾಧಿಸುವುದು ಇಂದಿನ ಪ್ರಮುಖ ಕಾಳಜಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕಿಯಾದ ಹಾಗೂ ಸಹ ಪ್ರಾಧ್ಯಾಪಕರಾದ ಶ್ರೀಮತಿ ರೇಶ್ಮಾ ಎಂ.ವೈ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅತಿಥಿಗಳನ್ನು ಸ್ವಾಗತಿಸಿದರು. ಬಿ.ಎಡ್ ನ ಪ್ರಥಮ ಮತ್ತು ದ್ವಿತೀಯ ವರ್ಷದ ವಿವಿಧ ವಿದ್ಯಾರ್ಥಿಗಳು ತಮ್ಮ ಮಾತೃಭಾಷೆಯಾದ ಹಿಂದಿ, ಕೊಡವ, ಬ್ಯಾರಿ, ಮಲಯಾಳಂ, ತುಳು, ಕೊಂಕಣಿ, ನವಾಯತ್, ತೆಲುಗು, ತಮಿಳು, ಮಿಜರಾಂ, ಮೇಘಾಲಯದ ಭಾಷೆಗಳ ಮಹತ್ವಗಳನ್ನು ತಿಳಿಸಿದರು.
ವಿದ್ಯಾರ್ಥಿ ಶಿಕ್ಷಕಿ ಸಿಸ್ಟರ್ ಲಿಯೋನ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ವಿದ್ಯಾರ್ಥಿ ಶಿಕ್ಷಕಿ ರೇಶ್ಮಾ ರೊಕ್ಕೊ ವಂದನಾರ್ಪಣೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment