ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ಸಂಭವಿಸಿದ್ದು ಯುವತಿ ಸಾವನ್ನಾಪ್ಪಿದ್ದು,
ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ.
ಇವರು ಹುಬ್ಬಳ್ಳಿಯಿಂದ ಆಗಮಿಸಿದ್ದು, ಇವರನ್ನು ಕರೆದುಕೊಂಡು ಹೋಗಲು ಬಂದಿದ್ದ ತಂದೆ ಟಿ.ಗಣೇಶ್ ಪೈ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದರು.
ನಂತರ ಹಿಂತಿರುಗುವ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಪ್ಯೆ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق