ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಣ್ಣೂರು ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

ಕಣ್ಣೂರು ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 


ಈ ವೇಳೆ ಮಾತನಾಡಿದ ಕಾಮತ್, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ ಬಳಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳಿಂದ ಅನುದಾನ ಒದಗಿಸಲಾಗುವುದು ಎಂದರು. 


ಈ ಸಂದರ್ಭದಲ್ಲಿ  ಸ್ಥಳೀಯ ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಕುಲಾಲ್ ಹಾಗೂ ಗೀತಾನಂದ್ ಶೆಟ್ಟಿ, ಬೂತ್ ಅಧ್ಯಕ್ಷರಾದ ವಿವೇಕ್ ಬಲ್ಲೂರ್ ಹಾಗೂ ರವಿರಾಜ್ ಕುಲಾಲ್ ಮತ್ತು ನೂರಾರು ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 Comments

Post a Comment

Post a Comment (0)

Previous Post Next Post