ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹಂತದ ಸುಮಾರು 30 ಕೋಟಿ ರೂಪಾಯಿ ವೆಚ್ಚದ ನವ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಮಾ. 22 ಮತ್ತು 23ರಂದು ಜರಗುವ ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶಿಲಾ ಸೇವೆ ಸಹಿತ ಶಿಲಾ ಪುಷ್ಪ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು.
ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರಿಯಮ್ಮ ದೇವಿಯ ಗರ್ಭಗುಡಿ, ಉಚ್ಚಂಗಿ ಗರ್ಭಗುಡಿ, ಗೋಪುರಗಳು, ಮುಖಮಂಟಪ, ಸುತ್ತು ಪೌಳಿ ಹಾಗೂ ಇನ್ನಿತರ ಅಭಿವೃದ್ಧಿ ಯೋಜನೆ ಸಹಿತವಾದ ಪ್ರಥಮ ಹಂತದ ಜೀರ್ಣೋದ್ದಾರ ಕೆಲಸಗಳು ಭರದಿಂದ ಸಾಗುತ್ತಿದ್ದು ಕಳೆದ ವರ್ಷ ಸುಗ್ಗಿ ಮಾರಿಪೂಜೆಯಂದು ಶಿಲಾ ಪುಷ್ಪ ಸಮರ್ಪಣೆಗೆ ಚಾಲನೆ ನೀಡಲಾಗಿದ್ದು ಈ ಬಾರಿ ಮತ್ತೆ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.
ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೆ ಅವಕಾಶ: ಮಾರಿಯಮ್ಮ ದೇವಿಯ ಜೀರ್ಣೋದ್ಧಾರ ಕಾರ್ಯಗಳಿಗೆ ಕನಿಷ್ಠ 9 ಶಿಲಾಸೇವೆ ಮತ್ತು ಅದಕ್ಕಿಂತ ಹೆಚ್ಚಿನ ಶಿಲಾಸೇವೆ ನೀಡುವ ಭಕ್ತಾದಿಗಳನ್ನು ಅಮ್ಮನ ಸನ್ನಿದಿಯ ವೇದಿಕೆಯಲ್ಲಿ ಪ್ರಸಾದ ನೀಡಿ ಗೌರವಿಸಲಾಗುವುದು. 9 ಶಿಲಾ ಸೇವೆ (ರೂಪಾಯಿ 9,999) ಮತ್ತು ಅದಕ್ಕಿಂತ ಹೆಚ್ಚಿನ ಶಿಲಾ ಸೇವೆ ನೀಡುವ ಭಕ್ತರು ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೊಂಡು, ಅಮ್ಮನ ಕೃಪೆಗೆ ಪಾತ್ರರಾಗುವಂತೆ ವಿನಂತಿಸಿದರು.
ಭಕ್ತಾಽಗಳಿಗೆ ಹರಕೆ ಸಲ್ಲಿಸಲು ಮುಕ್ತ ಅವಕಾಶ: ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ಸುಗ್ಗಿ ಮಾರಿಪೂಜೆಯಲ್ಲಿ ಭಕ್ತಾದಿಗಳ ಪಾಲ್ಗೊಳ್ಳುವಿಕೆಗೆ ನಿರ್ಬಂಧಗಳಿತ್ತು. ಆದರೆ ಈ ಬಾರಿಯ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಎಲ್ಲಾ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಂಡು ಭಕ್ತಾಽಗಳಿಗೆ ಎಲ್ಲಾ ಹರಕೆ ಮತ್ತು ಸೇವೆಗಳನ್ನು ಸಮರ್ಪಿಸಲು ಮುಕ್ತ ಅವಕಾಶ ಒದಗಿಸಲಾಗಿದೆ. ಮಾ. 22 ರ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮಾ. 23ರ ಸಂಜೆ 6 ಗಂಟೆಯವರೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ವಿವಿಧ ಸಿದ್ಧತೆಗಳನ್ನು ನಡೆಸಲಾಗಿದೆ. ಸ್ವಯಂ ಸೇವಕರು ಮಾತ್ರವಲ್ಲದೆ ಪೋಲಿಸ್ ಇಲಾಖೆ, ಗೃಹರಕ್ಷಕದಳ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದರು.
2022ರಲ್ಲಿ ಪ್ರಥಮ ಹಂತದ ಜೀರ್ಣೋದ್ಧಾರ ಪೂರ್ಣ: ಊರ - ಪರವೂರ ಭಕ್ತಾದಿಗಳ ಪೂರ್ಣ ಸಹಕಾರದೊಂದಿಗೆ ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು 2023ರಲ್ಲಿ ಪ್ರಥಮ ಹಂತದ ಜೀರ್ಣೋದ್ಧಾರ ಪೂರ್ಣಗೊಂಡು, ಮಾರಿಯಮ್ಮ ದೇವಿಯ ಗರ್ಭಗುಡಿ ಲೋಕಾರ್ಪಣೆ ಮತ್ತು ಬಂಗಾರದ ಗದ್ದುಗೆ ಪ್ರತಿಷ್ಟಾಪಿಸಲು ಸಂಕಲ್ಪಿಸಲಾಗಿದೆ. ಜೀರ್ಣೋದ್ಧಾರ ಕಾರ್ಯಗಳಿಗೆ ಸರಕಾರದಿಂದಲೂ 10 ಕೋ. ರೂ. ಅನುದಾನವನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಸುದ್ಧಿಗೋಷ್ಟಿಯಲ್ಲಿ ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಽಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿ ಸಂಚಾಲಕ ರಮೇಶ್ ಶೆಟ್ಟಿ, ಗ್ರಾಮ ಸಮಿತಿ ಸಂಚಾಲಕ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಬಂಗೇರ, ಚಂದ್ರಶೇಖರ ಅಮೀನ್, ರವೀಂದ್ರ ಕಾಪು, ಬಾಬು ಮಲ್ಲಾರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق