ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಾರಿ ಮತ್ತು ಕಾರು ಅಪಘಾತ; ತಾಯಿ ಮತ್ತು ಮಗಳು ಸಾವು

ಲಾರಿ ಮತ್ತು ಕಾರು ಅಪಘಾತ; ತಾಯಿ ಮತ್ತು ಮಗಳು ಸಾವು

 


ಬೆಳಗಾವಿ: ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿರುವ ಪತಿ ಪರಿಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.


ಬೆಳಗಾವಿ ಜಿಲ್ಲೆಯ ಹುಕ್ಕಾರಿ ತಾಲೂಕಿನ ನರಸಿಂಗಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ.

ಇನೋವಾ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.


ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವೈದ್ಯೆ ಡಾ. ಶ್ವೇತಾ ಎಸ್. ಮುರಗೋಡ (40), ಪುತ್ರಿ ಶಿಯಾ ಮುರಗೋಡ (7) ಮೃತಪಟ್ಟವರು. ವೈದ್ಯ ಸಚಿನ ಮುರಗೋಡ ತೀವ್ರ ಗಾಯಗೊಂಡಿದ್ದಾರೆ.


ಬೆಳಗಾವಿ ನಗರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಕೇಶ್ವರ ಪಟ್ಟಣಕ್ಕೆ ಹೋಗುತ್ತಿರುವ ವೇಳೆ ನರಸಿಂಗಪುರ ಗ್ರಾಮದ ಬಳಿಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ವೇಗವಾಗಿ ಡಿಕ್ಕಿ ಹೊಡೆದಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post