ಮಂಗಳೂರು: ಮಹಾನಗರ ಪಾಲಿಕೆಯ ಡೊಂಗರಕೇರಿ ವಾರ್ಡಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದ ರಸ್ತೆಯ ಅಭಿವೃದ್ಧಿ ಹಾಗೂ ಒಳಚರಂಡಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ ನಗರದ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ತರಲಾಗಿದೆ. ಅವೆಲ್ಲವನ್ನೂ ಸಮರ್ಪಕವಾಗಿ ಬಳಸಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಗದೀಶ್ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮೊಕ್ತೇಸರರಾದ ಸಾಯಿರಾಮ್, ಮಾಧವ ಸುವರ್ಣ, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ದಿನಕರ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಅಕ್ಷತ್ ಕಾಮತ್, ಸಚಿನ್ ರಾಜ್ ರೈ, ಶರತ್ ಶೆಟ್ಟಿ, ಪುಷ್ಪ ಶೆಟ್ಟಿ, ಭವಾನಿ ಶಂಕರ್, ವಸಂತ್ ಜೆ ಪೂಜಾರಿ, ಗಣೇಶ್ ಪ್ರಸಾದ್, ಪಾಲಿಕೆ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment