ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಶಾಸಕ ಕಾಮತ್‌

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಶಾಸಕ ಕಾಮತ್‌


ಮಂಗಳೂರು: ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಮಂಗಳವಾರ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.


ಶಾಲಾ- ಕಾಲೇಜಿನಲ್ಲಿ ಮಕ್ಕಳಲ್ಲಿ ಸಮಾನತೆಯ ಭಾವನೆ ಮೂಡಲು ಸಮವಸ್ತ್ರ ಅಗತ್ಯ. ಸಮವಸ್ತ್ರವನ್ನು ಕಡ್ಡಾಯಗೊಳಿಸಿದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯೇಕತೆ ಸೂಚಿಸುವ ಉಡುಪು ಧರಿಸಿ ತರಗತಿಯೊಳಗೆ ಆಗಮಿಸುವುದು ಸರಿಯಲ್ಲ. ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಲ್ಲಿ ಕಲಿಕೆಗೆ ಆದ್ಯತೆ ನೀಡಬೇಕೇ ವಿನಃ ಇತರ ವಿಚಾರಗಳ ಬಗ್ಗೆ ವಿವಾದ, ಹಠಮಾರಿ ಧೋರಣೆ ತಳೆಯುವುದು ತರವಲ್ಲ. ವಿದ್ಯಾರ್ಥಿ ಜೀವನದಲ್ಲಿ ಸಮರ್ಪಕವಾಗಿ ಅಧ್ಯಯನ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಎಲ್ಲ ವಿದ್ಯಾರ್ಥಿಗಳು ಮನಸ್ಸು ಮಾಡಬೇಕು ಎಂದು ಅವರು ಹೇಳಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post