ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾ.25: ಕಸಾಪ ಮಂಗಳೂರು ತಾಲೂಕು ಘಟಕ ಪದಗ್ರಹಣ

ಮಾ.25: ಕಸಾಪ ಮಂಗಳೂರು ತಾಲೂಕು ಘಟಕ ಪದಗ್ರಹಣ


ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ತಾಲೂಕು ಘಟಕ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಮಾ.25ರಂದು ಶುಕ್ರವಾರ ಸಂಜೆ 4:30ಕ್ಕೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಭವನ, ಮಂಗಳೂರು ಇಲ್ಲಿ ಜರುಗಲಿರುವುದು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ|| ಎಚ್. ಆರ್. ವಿಶ್ವಾಸ್, ಅಖಿಲ ಭಾರತ ಪ್ರಶಿಕ್ಷಣ ಪ್ರಮುಖ ಸಂಸ್ಕೃತ ಭಾರತಿ, ಇವರು ಭಾಗವಿಸಲಿದ್ದಾರೆ ಮತ್ತು “ಸಾಹಿತ್ಯ ಮತ್ತು ಸಮಾಜ” ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ.


ಸಭಾಧ್ಯಕ್ಷರಾಗಿ ಡಾ|| ಎಂ.ಪಿ. ಶ್ರೀನಾಥ್, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲೆ, ಇವರು ಕರ‍್ಯಕ್ರಮ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಸದಸ್ಯರು ಹಾಗೂ ಕನ್ನಡ ಅಭಿಮಾನಿಗಳಿಗೆ ಮುಕ್ತ ಆಹ್ವಾನ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಯೋಜಿತ ಅಧ್ಯಕ್ಷರಾದ ಡಾ| ಮಂಜುನಾಥ ಎಸ್. ರೇವಣಕರ್ ತಿಳಿಸಿರುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ‍್ಯದರ್ಶಿಗಳಾದ ಡಾ. ಮುರಲೀ ಮೋಹನ್ ಚೂಂತಾರು ಹಾಗೂ ಶ್ರೀ ಗಣೇಶ್ ಪ್ರಸಾದ್‌ಜೀ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಇದೇ ಸಂದರ್ಭದಲ್ಲಿ ಶ್ರೀಮತಿ ಪವಿತ್ರ ಮಯ್ಯ ಇವರಿಂದ ಸುಗಮ ಸಂಗೀತ, ಕರ್ನಾಟಕ ಕಲಾಶ್ರೀ ವಿದ್ವಾನ್ ಕೆ. ಚಂದ್ರಶೇಖರ ನಾವಡ ಇವರ ನಿರ್ದೇಶನದ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ) ಸುರತ್ಕಲ್ ಪ್ರಸ್ತುತ ಪಡಿಸುವ ರೂಪಕ “ಸಂಭವಾಮಿ ಯುಗೇಯುಗೇ” ಭರತನಾಟ್ಯ ನೃತ್ಯ ಮತ್ತು ಎಸ್.ಡಿ.ಎಂ ಕಾನೂನು ಕಾಲೇಜು ವಿದ್ಯಾರ್ಥಿನಿಯರಿಂದ ‘ಹಚ್ಚೇವು ಕನ್ನಡದ ದೀಪ’ ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

hit counter

0 تعليقات

إرسال تعليق

Post a Comment (0)

أحدث أقدم