ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಿನಿ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು

ಮಿನಿ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು

 


ಭಾರತೀನಗರ: ಮದ್ದೂರಿನಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ಗಾರ್ಮೆಂಟ್ಸ್‌ ಕಾರ್ಮಿಕರಿದ್ದ ಮಿನಿ ಬಸ್‌ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಸಮೀಪದ ಹುಣ್ಣನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕೊತ್ತಿಪುರ ಗ್ರಾಮದ ಸಚಿನ್‌ (26) ಮೃತಪಟ್ಟ ಬೈಕ್‌ ಸವಾರ.

ಮದ್ದೂರು ಸಮೀಪ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕರಣ್‌ ಗಾರ್ಮೆಂಟ್ಸ್‌ ನಿಂದ ಮಹಿಳಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್‌ ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ.

ಗಾಯಾಳು ಚಾಲಕನನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿದ್ದ ನೌಕರರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 تعليقات

إرسال تعليق

Post a Comment (0)

أحدث أقدم