ಬೆಂಗಳೂರು: 3 ವರ್ಷದ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ. ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ, ಮಹಾಸಭೆಯ ಅಧ್ಯಕ್ಷ ಡಾ.ಮುರಳೀಧರ, ಖಜಾಂಚಿ ಡಾ.ಕೆ.ವಿ. ರಾಮಚಂದ್ರ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಮಾಲಿನಿ ರವರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಮುದಾಯದ ಸಂಘಟನೆ, ಅವಕಾಶ ವಂಚಿತ ಸಮಾಜ ಬಾಂಧವರಿಗೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯವನ್ನು ಮಾಡುವ ಉದ್ದೇಶವಿದೆ ಎಂದು ಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment