ಮಂಗಳೂರು: 200 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ವಾರ್ಡ್ ನ ಪದವಿನಂಗಡಿ ಜಂಕ್ಷನ್ ಬಳಿಯ ಕ್ಯಾಶ್ಯೂ ಫ್ಯಾಕ್ಟರಿ ಬಳಿಯಿಂದ ಗಂಧಕಾಡು ಸಂಪರ್ಕಿಸುವ ಮುಖ್ಯ ರಸ್ತೆ ಕಾಂಕ್ರೀಟಿಕರಣ ಮತ್ತು ಪಚ್ಚನಾಡಿ ವಾರ್ಡ್‌ನ ಪದವಿನಂಗಡಿಯಲ್ಲಿ ಮಹಾಲಸಾ ನಾರಾಯಣಿ ದೇವಸ್ಥಾನದಿಂದ ಮೇರಿಹಿಲ್ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೊಂದೆಲ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ ಮತ್ತಿತರರು ಸಾಥ್ ನೀಡಿದರು. ಬೂತ್ ಅಧ್ಯಕ್ಷರುಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق