ಮಳವಳ್ಳಿ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು. ಇವರಿಗೆ ಒಂದೂವರೆ ವರ್ಷದ ಗಂಡು ಮಗುವಿದ್ದು, ಎರಡನೇ ಮಗುವಿಗೆ ಎಂಟು ತಿಂಗಳ ಗರ್ಭಿಣಿಯಾಗಿದ್ದರು.
ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಕಾರಣ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜೊತೆಗೂಡಿ ಕಾರಿನಲ್ಲಿ ಬಂದಿದ್ದರು.
ಗುರುವಾರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.
ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ಈ ಬಗ್ಗೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق