ದಾವಣಗೆರೆ : ಇಲ್ಲಿನ ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಾಜ್ಞೆಯನ್ನು ಮಾ.15 ರ ಬೆಳಿಗ್ಗೆ 6 ಗಂಟೆಯಿಂದ ಮಾ.16 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಮಾ.13 ರಿಂದ ಮಾ.22 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಮತ್ತು ವಿನೋಬನಗರದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯು ನಡೆಯಲಿದ್ದು, ಜಾತ್ರೆಗೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ.
إرسال تعليق