ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್ ರಾಜ್‍ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ

ಪುನೀತ್ ರಾಜ್‍ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ

 


ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರದಾನ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ನಟ ಪುನೀತ್ ರಾಜ್ ಕುಮಾರ್ ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ಅವರು, ಅಪ್ಪು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರೆಂದೂ ಅಭಿಮಾನಿಗಳು, ಆರಾಧಕರ ಹೃದಯದಲ್ಲಿ ಜೀವಂತವಾಗಿದ್ದಾರೆ. ಅವರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಪುನೀತ್ ರಾಜ್ ಕುಮಾರ್ ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದವರು. ನಮಗೂ ಅವರು ಪ್ರೇರಣೆಯಾದಂತವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.


hit counter

0 تعليقات

إرسال تعليق

Post a Comment (0)

أحدث أقدم