ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮ್ಯೂಸಿಕ್ ಹಾಕುವ ವಿಚಾರಕ್ಕೆ ಎರಡು ತಂಡಗಳ ನಡುವೆ ಜಗಳ; ಓರ್ವ ಸಾವು

ಮ್ಯೂಸಿಕ್ ಹಾಕುವ ವಿಚಾರಕ್ಕೆ ಎರಡು ತಂಡಗಳ ನಡುವೆ ಜಗಳ; ಓರ್ವ ಸಾವು

 


ನವದೆಹಲಿ: ಜಿಮ್ ನಲ್ಲಿ ಮ್ಯೂಸಿಕ್ ಹಾಕುವ ವಿಚಾರಕ್ಕೆ ಎರಡು ತಂಡಗಳ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಓರ್ವ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾನೆ.

ದೆಹಲಿಯ ಜಿಮ್ ಒಂದರಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜೋರಾಗಿ ಮ್ಯೂಸಿಕ್ ಹಾಕಿದ್ದನ್ನು ಒಂದು ಗುಂಪು ಪ್ರಶ್ನಿಸಿದೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ.

ಈ ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಜಗಳವಾಗಿದ್ದು, ಓರ್ವನ ತಲೆಗೆ ತೀವ್ರ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم