ಬೆಂಗಳೂರು; ಸ್ಯಾಂಡಲ್ ವುಡ್ ರಾಧಿಕಾ ಪಂಡಿತ್ ನಿನ್ನೆ 38 ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರು ತಮ್ಮ ಹುಟ್ಟು ಹಬ್ಬವನ್ನು ಕುಟುಂಬದವರೊಂದಿಗೆ ಮತ್ತು ಆಪ್ತ ಮಿತ್ರರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ಫ್ಯಾಮಿಲಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ತಮ್ಮ ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿಕೆಯಿಂದಾಗಿ ಸಾಕಷ್ಟು ತಾರೆಯರು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿಲ್ಲ, ಅಂತೆಯೇ ರಾಧಿಕಾ ಪಂಡಿತ್ ಕೂಡ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸದಾ ಮುದ್ದಾದ ನಗುವಿನಿಂದಲೇ ಅಭಿಮಾನಿಗಳಿಗೆ ಇಷ್ಟ ಆಗುವ ರಾಧಿಕಾ ಪಂಡಿತ್, ಪತಿ ಯಶ್, ಮಕ್ಕಳಾದ ಯಥರ್ವ್ ಹಾಗೂ ಪುತ್ರಿ ಐರಾ ಜೊತೆ ರಾಧಿಕಾ ಪಂಡಿತ್ ಸರಳವಾಗಿ ಹುಟ್ಟಿ ಹಬ್ಬ ಆಚರಿಸಿಕೊಂಡಿದ್ದಾರೆ.
ಸಿನಿಮಾ ಕೆಲಸದ ನಿಮಿತ್ತ ಮುಂಬಯಿನಲ್ಲಿದ್ದ ಯಶ್, ಪತ್ನಿ ರಾಧಿಕಾ ಪಂಡಿತ್ ಬರ್ತ್ ಡೇ ನಿಮಿತ್ತ ಬೆಂಗಳೂರಿಗೆ ಬಂದು, ಮುದ್ದಿನ ಮಡದಿಯ ಬರ್ತ್ ಡೇಯನ್ನು ಸೆಲೆಬ್ರೆಟ್ ಮಾಡಿದ್ದಾರೆ.
ರಾಧಿಕಾ ಪಂಡಿತ್ ಹುಟ್ಟು ಹಬ್ಬದಲ್ಲಿ ಯಶ್ ಕುಟುಂಬ ಹಾಗು ರಾಧಿಕಾ ಪಂಡಿತ್ ಕುಟುಂಬ ಹಾಗೂ ಆಪ್ತರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಇದೀಗ ರಾಧಿಕಾ ಪಂಡಿತ್ ಫ್ಯಾಮಿಲಿ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Post a Comment