ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಹಾಶಿವರಾತ್ರಿ ಪ್ರಯುಕ್ತ ದೇವರ ದರ್ಶನ ಕ್ಕೆ ಹೊರಟ ಕಾರು ಅಪಘಾತ; 6ಮಂದಿ ಸಾವು

ಮಹಾಶಿವರಾತ್ರಿ ಪ್ರಯುಕ್ತ ದೇವರ ದರ್ಶನ ಕ್ಕೆ ಹೊರಟ ಕಾರು ಅಪಘಾತ; 6ಮಂದಿ ಸಾವು

 


ನುಪಾಡಾ(ಒಡಿಶಾ): ಮಹಾಶಿವರಾತ್ರಿ ಪ್ರಯುಕ್ತ ಶಿವ ದೇವರ ದರ್ಶನ ಪಡೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಭಕ್ತರು ಮೃತಪಟ್ಟರು.

ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್​ ಬರುತ್ತಿದ್ದಾಗ ಅವಘಡ ಸಂಭವಿಸಿದೆ.


ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.


ಮೂಲಗಳ ಪ್ರಕಾರ ಛತ್ತೀಸ್​ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ.


ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


0 Comments

Post a Comment

Post a Comment (0)

Previous Post Next Post