ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭೀಕರ ರಸ್ತೆ ಅಪಘಾತ; 8 ಮಂದಿ ಸಾವು

ಭೀಕರ ರಸ್ತೆ ಅಪಘಾತ; 8 ಮಂದಿ ಸಾವು

 


ತುಮಕೂರು: ಇಲ್ಲಿನ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಜನರು ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ತಿರುವಿನ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು, ವೃದ್ಧರು ಪ್ರಯಾಣಿಸುತ್ತಿದ್ದರು. ಮೃತಪಟ್ಟವರಲ್ಲಿ ಹೆಚ್ಚು ವಿದ್ಯಾರ್ಥಿಗಳೇ ಇದ್ದಾರೆ ಎನ್ನಲಾಗಿದೆ.

ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


hit counter

0 Comments

Post a Comment

Post a Comment (0)

Previous Post Next Post