ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಯಾಂಡಲ್ ವುಡ್ ಖ್ಯಾತ ನಟಿಯ ಸಹೋದರನ ವಿರುದ್ಧ ಅತ್ಯಾಚಾರ ಆರೋಪ

ಸ್ಯಾಂಡಲ್ ವುಡ್ ಖ್ಯಾತ ನಟಿಯ ಸಹೋದರನ ವಿರುದ್ಧ ಅತ್ಯಾಚಾರ ಆರೋಪ

 


ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟಿಯ ಸಹೋದರನ ವಿರುದ್ಧ ಅತ್ಯಾಚಾರ ಆರೋಪದ ಕೇಸ್ ದಾಖಲಾಗಿದೆ. ಅವರ ವಿರುದ್ಧ ಸಾಫ್ಟ್ ವೇರ್ ಉದ್ಯೋಗಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಖ್ಯಾತ ನಟಿಯ ಸಹೋದರ ಎಂಬುದಾಗಿ ಹೇಳಿ, ಸಾಫ್ಟ್ ವೇರ್ ಇಂಜಿನಿಯರ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದರು.

ಪರಿಚಯ ಸ್ನೇಹಕ್ಕೆ ತಿರುಗಿ ಸ್ನೇಹ ಸಲುಗೆಯ ಮೂಲಕ ಜನವರಿ 18ರಂದು ಜಯನಗರದ ಖಾಸಗಿ ಹೋಟೆಲ್ ಗೆ ಕರೆಸಿಕೊಂಡು, ಯುವತಿಗೆ ವಿವಿಧ ಆಶ್ವಾಸನೆ ನೀಡಿ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವಂತ ಮಹಿಳಾ ಠಾಣೆಯ ಪೊಲೀಸರು, ಖ್ಯಾತ ನಟಿ ಸಹೋದರನ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

hit counter

0 تعليقات

إرسال تعليق

Post a Comment (0)

أحدث أقدم