ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚುಂಚಿ ಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರು ಪಾಲು

ಚುಂಚಿ ಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರು ಪಾಲು

 


ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಪ್ರವಾಸಿತಾಣ ಚುಂಚಿ ಫಾಲ್ಸ್ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯೊಂದು ನಡೆದಿದೆ.

ನೀರುಪಾಲಾದ ವಿದ್ಯಾರ್ಥಿಗೆ ಶೋಧಕಾರ್ಯ ಮುಂದುವರೆದಿದ್ದು, ಉತ್ತರಾಖಂಡ ಮೂಲದ ಅಂಬರ್ ಗಂಗುಲ ಎಂಬ ವಿದ್ಯಾರ್ಥಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ವಿದ್ಯಾರ್ಥಿಯು ದೊಮ್ಮಸಂದ್ರದಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದು, ಐವರು ಸ್ನೇಹಿತರೊಂದಿಗೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಚುಂಚಿ ಫಾಲ್ಸ್​ಗೆ ಬಂದಿದ್ದ.

ಈ ವೇಳೆ ಈಜಲು ನೀರಿಗಿಳಿದ ಅಂಬರ್, ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ, ಸ್ಥಳೀಯ ನುರಿತ ಈಜುಗಾರರ ಸಹಾಯದಿಂದ ಶವಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post