ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಾಳಿ ಮಳೆಗೆ ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ತೆಂಗಿನ ಮರ ಬಿದ್ದು ಬಾಲಕಿ ಸಾವು, ಇಬ್ಬರು ಗಂಭೀರ

ಗಾಳಿ ಮಳೆಗೆ ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ತೆಂಗಿನ ಮರ ಬಿದ್ದು ಬಾಲಕಿ ಸಾವು, ಇಬ್ಬರು ಗಂಭೀರ

 


ಮಂಡ್ಯ: ಭಾರಿ ಬಿರುಗಾಳಿಗೆ ತೆಂಗಿನ ಮರ ಕಾರು ಮತ್ತು ಬೈಕ್​ ಮೇಲೆ ಬಿದ್ದ ಪರಿಣಾಮ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಜಿಲ್ಲೆಯ ದೊಡ್ಡಪಾಳ್ಯದೊಡ್ಡಿ ಬಳಿಯ ಶ್ರೀರಂಗಪಟ್ಟಣ-ಬನ್ನೂರು ರಸ್ತೆಯಲ್ಲಿ ನಡೆದಿದೆ.

ಪ್ರಿಯಾಂಕ (12) ಮೃತಪಟ್ಟಿರುವ ಬಾಲಕಿ. ಕೆಆರ್​ಎಸ್​ ಗ್ರಾಮದ ನಾಗರಾಜು ಮತ್ತು ಪ್ರೇಮ ದಂಪತಿಯ ಪುತ್ರಿ.

ನಿನ್ನೆ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯದೊಡ್ಡಿ ಬಳಿ ಬಿರುಗಾಳಿಯಿಂದ ಕಾರು ಹಾಗೂ ಬೈಕ್ ಮೇಲೆ ತೆಂಗಿನ ಮರ ಬಿದ್ದು ದುರಂತ ಸಂಭವಿಸಿದೆ.

ಮೃತ ಪ್ರಿಯಾಂಕ ತಂದೆ-ತಾಯಿಯ ಜೊತೆ ಬೈಕ್​​ನಲ್ಲಿ ಸಂಬಂಧಿಕರ ಮನೆಗೆ ಹೋಗುತ್ತಿದ್ದಳು. ದೊಡ್ಡಪಾಳ್ಯದೊಡ್ಡಿ ಬಳಿ ಬರುತ್ತಿದ್ದಂತೆ ಬಿರುಗಾಳಿ ಹೆಚ್ಚಾಗಿದೆ.

ಇದೇ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ತೆಂಗಿನ ಮರ ಬೈಕ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಬೈಕ್ ಮುಂದೆ ಕುಳಿತಿದ್ದ ನಾಗರಾಜು ಹಾಗೂ ಪುತ್ರಿ ಪ್ರಿಯಾಂಕಾಗೆ ಗಭೀರ ಗಾಯವಾಗಿತ್ತು. ರಕ್ತದ ಮಡುವಿನಲ್ಲಿ ನರಳುತ್ತಿದ್ದವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಪ್ರಿಯಾಂಕಾ ಮೃತಪಟ್ಟಿದ್ದಾಳೆ.

ನಾಗರಾಜ್​ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿಂಬದಿ ಕುಳಿತಿದ್ದ ಪತ್ನಿ ಪ್ರೆಮಾ, ಪುತ್ರ ಚೇತನ್​ಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ಸಂದರ್ಭದಲ್ಲಿ ಕಾರಿನ ಮೇಲೂ ಮರ ಬಿದ್ದಿದ್ದು, ಪಿಹಳ್ಳಿ ಗ್ರಾಮದ ನಾಗಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

hit counter

0 Comments

Post a Comment

Post a Comment (0)

Previous Post Next Post