ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಂಪ್ಯೂಟರ್ ಸೆಂಟರ್ ಗೆ ಹೋಗುವುದಾಗಿ ಹೇಳಿ ನಾಪತ್ತೆಯಾದ ಯುವಕ ಶವವಾಗಿ ಕಣಿವೆಯಲ್ಲಿ ಪತ್ತೆ

ಕಂಪ್ಯೂಟರ್ ಸೆಂಟರ್ ಗೆ ಹೋಗುವುದಾಗಿ ಹೇಳಿ ನಾಪತ್ತೆಯಾದ ಯುವಕ ಶವವಾಗಿ ಕಣಿವೆಯಲ್ಲಿ ಪತ್ತೆ

 




ಹುಬ್ಬಳ್ಳಿ: ತಾಲೂಕಿನ ಕೋಟಗೊಂಡಹುಣಸಿ ಗ್ರಾಮದ ಹೊರಹೊಲಯದ ಕಣಿವೆಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೃತ ಯುವಕನನ್ನು ಶಶಾಂಕ್ ಮಾಗಡಿ(21) ಎಂದು ಗುರುತಿಸಲಾಗಿದೆ.


ತಂದೆ ನಡೆಸುತ್ತಿದ್ದ ಕಂಪ್ಯೂಟರ್ ಸೆಂಟರ್​​ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಶಶಾಂಕ್​ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದ.


ಇಂದು ಕಣಿವೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರು ಶಶಾಂಕ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.


ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೀಗ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ.


0 تعليقات

إرسال تعليق

Post a Comment (0)

أحدث أقدم