ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದು, ಅಪ್ಪ, ಮಗಳು ಮೃತಪಟ್ಟಿರುವ ಘಟನೆಯೊಂದು ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿದೆ.
ಮದುವೆಗಾಗಿ ಕಲ್ಯಾಣ ಮಂಟಪ ಬುಕ್ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.
ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿತ್ತು.
ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ವಾರ ಚೈತನ್ಯಳ ನಿಶ್ಚಿತಾರ್ಥ ನಿಗದಿಯಾಗಿತ್ತಲ್ಲದೆ, ಕೆಲ ದಿನಗಳಲ್ಲೇ ಮದುವೆ ಸಮಾರಂಭ ನಡೆಯಬೇಕಿತ್ತು.
ಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್ ಮಾಡಿಕೊಂಡು ಸ್ಕೂಟಿಯಲ್ಲಿ ನೈಸ್ ರಸ್ತೆಯ ಮಂಗನಹಳ್ಳಿ ಬಳಿ ಬರುತ್ತಿದ್ದಾಗ, ವಿದ್ಯುತ್ ಪರಿವರ್ತಕ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.
ಸ್ಥಳೀಯರು ಕೂಡಲೇ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ದುರಂತ ದಲ್ಲಿ ಇಬ್ಬರನ್ನೂ ಕಳೆದುಕೊಂಡು ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق