ಮಂಜೇಶ್ವರ: ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ವಾಟೆತ್ತಿಲ ಜಾಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಪುನರ್ ನವೀಕರಣ, ಅಷ್ಟಬಂಧ ಬ್ರಹ್ಮಕಲಶೋತ್ಸವವು ತಂತ್ರಿವರೇಣ್ಯ ಮಹಾಮಹೋಪಾಧ್ಯಾಯ ವೇದಮೂರ್ತಿ ಬಳ್ಳಪದವು ಶ್ರೀ ಮಾಧವ ಉಪಾಧ್ಯಾಯ ಇವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಏಪ್ರಿಲ್ 1ರ ಶುಕ್ರವಾರದಿಂದ ಏ.6ರ ಬುಧವಾರದ ವರೆಗೆ ವಿಧ್ಯುಕ್ತವಾಗಿ ವಿಜೃಂಭಣೆಯಿಂದ ಜರಗಲಿರುವುದು.
ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮಾಧವ ಭಟ್ ವಾಟೆತ್ತಿಲಜಾಲು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವಸದಸ್ಯರುಗಳು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment