ಮೈಸೂರು: ಹಿರಿಯ ರಂಗಕರ್ಮಿ ಮಂಡ್ಯ ರಮೇಶ್ ಮಡದಿ ಸರೋಜಾ ಹೆಗಡೆ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ನೀಡುವ 2021ನೇ ಸಾಲಿನ ವಾರ್ಷಿಕ ರಂಗ ಪ್ರಶಸ್ತಿ ದೊರೆತಿದೆ.
ರಂಗಭೂಮಿಯ ಅಭಿವೃದ್ಧಿಗೆ ನಿರಂತವಾಗಿ ಶ್ರಮಿಸುತ್ತಿರುವ ನಾಡಿನ ವಿವಿಧ ಭಾಗದ ರಂಗಕರ್ಮಿಗಳನ್ನು ಗುರುತಿಸಿ ಪ್ರತಿ ವರ್ಷವೂ ನಾಟಕ ಅಕಾಡೆಮಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುತ್ತಾ ಬಂದಿದೆ.
ಅದೇ ರೀತಿ ಈ ಬಾರಿಗೂ 24 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹೊಸದಾಗಿ ಯುವ ರಂಗ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, 40 ವರ್ಷ ಮೀರದ ರಂಗ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. 2021ರ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಏಪ್ರಿಲ್‌ನಲ್ಲಿ ಕಲ್ಯಾಣ ಕರ್ನಾಟಕದ ಭಾಗವಾದ ಬಳ್ಳಾರಿಯಲ್ಲಿ ನಡೆಯಲಿದೆ.
ರಾಜ್ಯದ ಎಲ್ಲ ಭಾಗಗಳ ರಂಗ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಮೈಸೂರಿನಿಂದ ಸರೋಜಾ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
Post a Comment