ವಿಜಯನಗರ: ದೇವಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ನೀರು ಬಿಡಲು ಹೋದ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಸೋಮವಾರ ಬೆಳಗ್ಗಿನ ಜಾವ ಸಾವನ್ನಪ್ಪಿದರು.
ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಗ್ರಾಪಂ ಸದಸ್ಯ ಕೃಷ್ಣಮೂರ್ತಿ(35) ಮೃತ ದುರ್ದೈವಿ. ಇಂದು ಬೆಳಗ್ಗೆ ಕಟ್ಟಡ ಕಾಮಗಾರಿಗೆ ನೀರು ಬಿಡಲು ಕೃಷ್ಣಮೂರ್ತಿ ಹೋಗಿದ್ದರು.
ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق