ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಾ.11 ಶುಕ್ರವಾರದಂದು 15 ಘಟಕಗಳ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಮುಂಬರುವ ಚುನಾವಣೆ ಹಾಗೂ ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ಸೇರ್ಪಡೆಗೊಳಿಸುವ ಬಗ್ಗೆ ಚರ್ಚಿಸಲಾಗುವುದು.
ಈ ಸಭೆಯಲ್ಲಿ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮುಲ್ಕಿ, ಮೂಡಬಿದ್ರಿ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಬೆಳ್ಳಾರೆ, ಸುಳ್ಯ ಸುಬ್ರಹ್ಮಣ್ಯ ಘಟಕಗಳ ಘಟಕಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment