ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಂದಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ತಾಯಿ ಮಗ ಸಾವು

ಹಂದಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ತಾಯಿ ಮಗ ಸಾವು

 


ಚಿತ್ರದುರ್ಗ: ರಸ್ತೆಗೆ ಅಡ್ಡ ಬಂದ ಹಂದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಐಮಂಗಲ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಸ್ತೆಯಲ್ಲಿ ಅಡ್ಡ ಬಂದ ಹಂದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರವಿಚಂದ್ರ (40), ತಾಯಿ ಯಲ್ಲಮ್ಮ (65) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಾಗಳಾಗಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


hit counter

0 تعليقات

إرسال تعليق

Post a Comment (0)

أحدث أقدم