ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆರೆಯಲ್ಲಿ ಮುಳುಗಿ ವೃದ್ಧೆ ಸಾವು

ಕೆರೆಯಲ್ಲಿ ಮುಳುಗಿ ವೃದ್ಧೆ ಸಾವು

 


ಮೈಸೂರು: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೃದ್ಧೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯೊಂದು ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಪಾರ್ವತಮ್ಮ (85) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ 11 ಗಂಟೆ ವೇಳೆಗೆ ತಮ್ಮ ಮನೆಯ ಜಾನುವಾರುಗಳನ್ನು ಸಮೀಪದ ಕೆರೆಗೆ ನೀರು ಕುಡಿಸಲು ತೆರಳಿದ್ದರು. ಈ ವೇಳೆ ಜಾನುವಾರುಗಳನ್ನು ನೀರಿನೊಳಗೆ ಎಳೆದುಕೊಂಡು ಹೋದಾಗ ಈ ದುರಂತ ಸಂಭವಿಸಿದೆ.

ಗ್ರಾಮಸ್ಥರೊಬ್ಬರು ಕಾಪಾಡಲು ಮುಂದಾಗಿದ್ದು, ಆದರೆ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರಿಗೆ ಮೂವರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮಗ ರೇವಣ್ಣ ದೂರು ದಾಖಲಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم