ಚಿತ್ರದುರ್ಗ: ಎತ್ತಿನಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತಿಪ್ಪೇಸ್ವಾಮಿ (40) ಮೃತ ರೈತರಾಗಿದ್ದಾರೆ. ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ಅಪಘಾತ ಸಂಭವಿಸಿದೆ.
ಎತ್ತಿನಗಾಡಿಯಲ್ಲಿದ್ದ ಮತ್ತೊಬ್ಬ ರೈತ ಸುರೇಶ ಹಾಗೂ ಎರಡು ಎತ್ತುಗಳಿಗೆ ಗಾಯಗಳಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಸುರೇಶ್ ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಪ್ರಕರಣ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Post a Comment