ನವದೆಹಲಿ: ಬಡವರಿಗಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಿಳಿಸಿದ್ದಾರೆ.
ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ, ದೇಶದ ಪ್ರತಿಯೊಬ್ಬ ಬಡವರಿಗೂ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ, ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
देश के हर गरीब को पक्का मकान देने के संकल्प में हमने एक अहम पड़ाव तय कर लिया है। जन-जन की भागीदारी से ही तीन करोड़ से ज्यादा घरों का निर्माण संभव हो पाया है। मूलभूत सुविधाओं से युक्त ये घर आज महिला सशक्तिकरण का प्रतीक भी बन चुके हैं। pic.twitter.com/6jmMcMs21J
— Narendra Modi (@narendramodi) April 8, 2022
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ.
Post views:
Post a Comment