ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮೂರು ಕೋಟಿ ಮನೆಗಳ ನಿರ್ಮಾಣ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮೂರು ಕೋಟಿ ಮನೆಗಳ ನಿರ್ಮಾಣ: ಪ್ರಧಾನಿ ಮೋದಿ

 

ನವದೆಹಲಿ: ಬಡವರಿಗಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ  ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಿಳಿಸಿದ್ದಾರೆ.

ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ, ದೇಶದ ಪ್ರತಿಯೊಬ್ಬ ಬಡವರಿಗೂ  ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ, ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ.

Post views: 

hit counter

0 تعليقات

إرسال تعليق

Post a Comment (0)

أحدث أقدم